ಸಿದ್ದಾಪುರ, ಜು. 1: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಹುಂಡಿ ಎಂಬಲ್ಲಿ ವ್ಯಕ್ತಿಯೋರ್ವನ ಕುಟುಂಬದವರಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆ ಆ ಭಾಗದಲ್ಲಿ ಜಿಲ್ಲಾಡಳಿತ ವತಿಯಿಂದ ನಿಬರ್ಂಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಈ ಹಿನ್ನೆಲೆ ಮಾಲ್ದಾರೆ ಗ್ರಾಮ ಪಂಚಾಯಿತಿ ವತಿಯಿಂದ ಹುಂಡಿ ಗ್ರಾಮದ ನಿಬರ್ಂಧಿತ ಪ್ರದೇಶಗಳಲ್ಲಿನ ಸುತ್ತಮುತ್ತಲ ರಸ್ತೆಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಆ ಭಾಗದಲ್ಲಿ ಯಾರೂ ಕೂಡ ಮನೆಯಿಂದ ಹೊರಬಾರದಂತೆ ಸೂಚನೆಯನ್ನು ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಓ ರಾಜೇಶ್ ತಿಳಿಸಿದ್ದಾರೆ. ಬೆಂಗಳೂರಿನಿಂದ ಹುಂಡಿ ಗ್ರಾಮಕ್ಕೆ ಆಗಮಿಸಿದ ವ್ಯಕ್ತಿಯೋರ್ವನಿಗೆ ವೈರಸ್ ಪತ್ತೆಯಾಗಿ ನಂತರ ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರಿಗೂ ವೈರಸ್ ಪತ್ತೆಯಾದ ಹಿನ್ನೆಲೆ ಈ ಭಾಗದಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗಿದೆ ಎಂದು ಪಿಡಿಒ ಮಾಹಿತಿ ನೀಡಿದ್ದಾರೆ.