ಸೋಮವಾರಪೇಟೆ, ಜು. 1: ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಲಿಂಗಪುರ-ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಮಾಸಿಕ ಪಂಚಮಿ ಪೂಜೆ ಶ್ರದ್ಧಾಭಕ್ತಿಯೊಂದಿಗೆ ನಡೆಯಿತು.

ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀ ರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ, ಅರ್ಚಕ ಜಗದೀಶ್ ಉಡುಪ ಅವರ ಪೌರೋಹಿತ್ವದಲ್ಲಿ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ಹೋಮ, ರುದ್ರಾಭಿಷೇಕ, ಅಲಂಕಾರ ಸೇವೆ, ಮಹಾಮಂಗಳಾರತಿ ನಡೆಯಿತು. ನಂತರ ಶ್ರೀ ನವನಾಗ ಸನ್ನಿಧಿಯಲ್ಲಿ ತಂಬಿಲ ಸೇವೆ, ಎಳನೀರು ಅಭಿಷೇಕ, ಮಹಾಮಂಗಳಾರತಿ ಜರುಗಿದವು. ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ನೆರವೇರಿದವು.