ಮಡಿಕೇರಿ, ಜು. 1: ಜಿಲ್ಲೆಗೆ ನೂತನವಾಗಿ ನೇಮಕಗೊಂಡ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಅವರು ಇಂದು ಈ ಹಿಂದೆ ಪ್ರಕೃತಿ ವಿಕೋಪ ಸಂಭವಿಸಿದ್ದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಹಿಂದಿನ ಮಳೆಗಾಲ ಸಂದರ್ಭ ಹಾನಿ ಉಂಟಾದ ಮಡಿಕೇರಿ ತಾಲೂಕಿನ ಮಕ್ಕಂದೂರು, ಉದಯಗಿರಿ ಹಾಗೂ ಸೋಮವಾರಪೇಟೆ ತಾಲೂಕಿನ ಹಾಲೇರಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.