ಮಡಿಕೇರಿ, ಜು. 2: ಬಡವರ ಬಂಧು ಯೋಜನೆಯಡಿ ಸಾಲ ವಿತರಣೆ ಮಾಡಲು ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿರುವ ಕ್ರಮವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಗುರುವಾರ ನಗರದ ಡಿಸಿಸಿ ಬ್ಯಾಂಕ್‍ನಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಾಕಷÀ್ಟು ಒತ್ತಡದ ಕೆಲಸಗಳಿವೆ. ಹೀಗಾಗಿ ಹೊಸ ಆದೇಶದ ಬಗ್ಗೆ ಗಮನಹರಿಸಲಾಗುತ್ತದೆ. ಜೊತೆಗೆ ಈ ಹಿಂದೆ ಇದ್ದಂತೆ ಫಲಾನುಭವಿಗಳ ಆಯ್ಕೆ ವಿಷÀಯದಲ್ಲಿ ಡಿಸಿಸಿ ಬ್ಯಾಂಕಿಗೂ ಸಹ ಅಧಿಕಾರ ನೀಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳ ಲಾಗುವುದು. ಅಲ್ಲದೆ, ಆಯಾಯ ಜಿಲ್ಲಾಧಿಕಾರಿಗಳು ಸಹ ಫಲಾನುಭವಿ ಗಳನ್ನು ಆಯ್ಕೆ ಮಾಡಲಿ. ಅಂತಿಮ ವಾಗಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಮಡಿಕೇರಿ, ಜು. 2: ಬಡವರ ಬಂಧು ಯೋಜನೆಯಡಿ ಸಾಲ ವಿತರಣೆ ಮಾಡಲು ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿರುವ ಕ್ರಮವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಗುರುವಾರ ನಗರದ ಡಿಸಿಸಿ ಬ್ಯಾಂಕ್‍ನಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.

ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಾಕಷÀ್ಟು ಒತ್ತಡದ ಕೆಲಸಗಳಿವೆ. ಹೀಗಾಗಿ ಹೊಸ ಆದೇಶದ ಬಗ್ಗೆ ಗಮನಹರಿಸಲಾಗುತ್ತದೆ. ಜೊತೆಗೆ ಈ ಹಿಂದೆ ಇದ್ದಂತೆ ಫಲಾನುಭವಿಗಳ ಆಯ್ಕೆ ವಿಷÀಯದಲ್ಲಿ ಡಿಸಿಸಿ ಬ್ಯಾಂಕಿಗೂ ಸಹ ಅಧಿಕಾರ ನೀಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳ ಲಾಗುವುದು. ಅಲ್ಲದೆ, ಆಯಾಯ ಜಿಲ್ಲಾಧಿಕಾರಿಗಳು ಸಹ ಫಲಾನುಭವಿ ಗಳನ್ನು ಆಯ್ಕೆ ಮಾಡಲಿ. ಅಂತಿಮ ವಾಗಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕಂದಾಯ ಇಲಾಖೆಯ ದೃಡೀಕರ ಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸೂಕ್ತ ಸಂದರ್ಭದಲ್ಲಿ ಧೃಢೀಕರಣ ನೀಡಿ ರೈತರು ಸಾಲ ಪಡೆಯಲು ಸಹಕರಿಸುವಂತೆ ತಿಳಿಸಿದರು.

ಈ ಸಂದರ್ಭ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರರು ಮತ್ತು ಡಿಸಿಸಿ ಬ್ಯಾಂಕಿನ ಮುಖಂಡ ರೊಂದಿಗೆ ಸಭೆ ನಡೆಸಿ ಕೃಷಿಕರಿಗೆ ಶೀಘ್ರವೇ ಧೃಢೀಕರಣ ದಾಖಲಾತಿ ನೀಡುವ ಕಾರ್ಯವಾಗಬೇಕು ಎಂದರು.

ಸಹಕಾರ ಸಂಘಗಳ ಉಪ ನಿಬಂಧಕರಾದ ಸಲೀಂ ಅವರು ಸಾಲ ವಿತರಣೆಯ ಕುರಿತಾಗಿ ಸಹಕಾರ ಸಚಿವರಿಗೆ ಮಾಹಿತಿ ನೀಡಿದರು. ಅಲ್ಲದೇ ಡಿಸಿಸಿ ಬ್ಯಾಂಕಿಗೆ ರಾಜ್ಯ ಸರ್ಕಾರದ ವತಿಯಿಂದ 33 ಕೋಟಿ 69 ಲಕ್ಷ ರೂಪಾಯಿ ಬಾಕಿ ಪಾವತಿ ಯಾಗಬೇಕಿದೆ ಎಂಬ ಅಂಶವನ್ನು ಸಚಿವರ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ 73 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ಈ ಪೈಕಿ 63 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗಣಕೀಕೃತ ಗೊಂಡಿವೆ. 10 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗಣಕೀಕೃತ ಗೊಳ್ಳಲು ಬಾಕಿ ಇದೆ. ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ 75 ಲಕ್ಷ ರೂ.ಗಳನ್ನು ಕಾಯ್ದಿರಿಸಿದೆ ಎಂದು ಮಾಹಿತಿ ನೀಡಿದರು.

ಕೊಡಗು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ, ರಾಜ್ಯ ಸರ್ಕಾರದಿಂದ ಬರಬೇಕಿರುವ ಬಾಕಿ ಹಣವನ್ನು ನೀಡಲು ಅಗತ್ಯ ಕ್ರಮ ವಹಿಸುವಂತೆ ಸಚಿವರಿಗೆ ಮನವಿ ಮಾಡಿದರು. ಅಲ್ಲದೆ ಕಳೆದ 5 ವರ್ಷಗಳಿಂದ ಡಿಸಿಸಿ ಬ್ಯಾಂಕಿಗೆ ಖಾಯಂ ವ್ಯವಸ್ಥಾಪಕ ನಿರ್ದೇಶಕರು ಬಂದಿಲ್ಲ. ಈ ನಿಟ್ಟಿನಲ್ಲಿ ಖಾಯಂ ವ್ಯವಸ್ಥಾಪಕ ನಿರ್ದೇಶಕರನ್ನು ಡಿಸಿಸಿ ಬ್ಯಾಂಕಿಗೆ ನೇಮಿಸುವಂತೆ ಕೋರಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಹರೀಶ್ ಪೂವಯ್ಯ, ಕೊಡಗು ಸಹಕಾರ ಯೂನಿಯನ್ ಬ್ಯಾಂಕಿನ ಅಧ್ಯಕ್ಷರಾದ ಮನುಮುತ್ತಪ್ಪ, ಡಿಸಿಸಿ ಬ್ಯಾಂಕಿನ ನಿರ್ದೇಶಕರು, ಅಧಿಕಾರಿಗಳು ಇತರರು ಇದ್ದರು.