ಗೋಣಿಕೊಪ್ಪಲು, ಜು. 2: ಗೋಣಿಕೊಪ್ಪಲುವಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ ಇಲಾಖೆಯು ಕೈಗೊಂಡ ಕ್ರಮ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಬೆಳಗಿ ಇವರಿಂದ ಮಾಹಿತಿ ಪಡೆದರು. ಮುಂಜಾನೆಯೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಇವರು ವಿದ್ಯಾರ್ಥಿಗಳು ಯಾವುದೇ ಭಯವನ್ನು ಇಟ್ಟುಕೊಳ್ಳದೆ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಸೂಚನೆ ನೀಡಿದರು. ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ನೋಡಲ್ ಅಧಿಕಾರಿ ಅಯ್ಯಪ್ಪ ಹಾಜರಿದ್ದರು.