ಮಡಿಕೇರಿ, ಜು. 2: ಕೊಡಗು ಜಿಲ್ಲೆಯಲ್ಲಿ ತಾ. 2 ರಂದು ಒಟ್ಟು 12 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೆ ಏರಿದ್ದು, 3 ಪ್ರಕರಣ ಗುಣಮುಖವಾಗಿದೆ. 69 ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವೀರಾಜಪೇಟೆ ತಾಲೂಕು ಗೋಣಿಕೊಪ್ಪ ಕೆ.ಇ.ಬಿ. ರಸ್ತೆಯ ನಿವಾಸಿಯೊಬ್ಬರಿಗೆ ಈ ಹಿಂದೆ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿಯ ಪ್ರಥಮ ಸಂಪರ್ಕದ ಅದೇ ಪ್ರದೇಶದ 30 ವರ್ಷದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ವೀರಾಜಪೇಟೆ ತಾಲೂಕು ಗೋಣಿಕೊಪ್ಪ ಕೆ.ಇ.ಬಿ ರಸ್ತೆಯ ನಿವಾಸಿಯೊಬ್ಬರಿಗೆ ಈ ಹಿಂದೆ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿಯ ಪ್ರಥಮ ಸಂಪರ್ಕದ ಅದೇ ಪ್ರದೇಶದ 4 ತಿಂಗಳ ಹೆಣ್ಣು ಮಗುವಿಗೆ ಸೋಂಕು ದೃಢಪಟ್ಟಿದೆ.
ವೀರಾಜಪೇಟೆ ತಾಲೂಕು ಗೋಣಿಕೊಪ್ಪ ಕೆ.ಇ.ಬಿ ರಸ್ತೆಯ ನಿವಾಸಿಯೊಬ್ಬರಿಗೆ ಈ ಹಿಂದೆ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿಯ ಪ್ರಥಮ ಸಂಪರ್ಕದ ಅದೇ ಪ್ರದೇಶದ 4 ವರ್ಷದ ಹೆಣ್ಣು ಮಗುವಿಗೆ ಸೋಂಕು ದೃಢಪಟ್ಟಿದೆ. ವೀರಾಜಪೇಟೆ ತಾಲೂಕು ಗೋಣಿಕೊಪ್ಪ ಕೆ.ಇ.ಬಿ ರಸ್ತೆಯ ನಿವಾಸಿಯೊಬ್ಬರಿಗೆ ಈ ಹಿಂದೆ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿಯ ಪ್ರಥಮ ಸಂಪರ್ಕದ ಅದೇ ಪ್ರದೇಶದ 8 ವರ್ಷದ ಹುಡುಗಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿ ನವೋದಯ ವಿದ್ಯಾಲಯದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಉತ್ತರ ಪ್ರದೇಶದ 35 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ನವೋದಯ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿ ರುವ ರಾಜಸ್ಥಾನದ 23 ವರ್ಷದ ಯುವತಿ, 40 ವರ್ಷದ ಪುರುಷ ಹಾಗೂ 35 ವರ್ಷದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
ನವೋದಯ ವಿದ್ಯಾಲಯದಲ್ಲಿ ವಾಸವಿರುವ ಪಂಜಾಬ್ ರಾಜ್ಯದ 16 ವರ್ಷದ ಹುಡುಗಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿ ನಗರದ ಡೈರಿ ಫಾರಂ ನಿವಾಸಿಯಾಗಿರುವ ಆರೋಗ್ಯ ಕಾರ್ಯಕರ್ತರೊಬ್ಬರ 16 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ.
ಮೇಲ್ಕಂಡ 10 ಪ್ರಕರಣಗಳು ಈಗಾಗಲೇ ನಿಯಂತ್ರಿತ ಪ್ರದೇಶದಲ್ಲಿ ವರದಿಯಾಗಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶವನ್ನು ತೆರೆದಿರುವುದಿಲ್ಲ.
ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದ ನಿವಾಸಿಯಾಗಿರುವ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕು ಹೆಬ್ಬೆಟ್ಟಗೇರಿ ಗ್ರಾಮದ 48 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಲಕ್ಷಣವಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.
ಈ ಎರಡೂ ಪ್ರಕರಣಗಳಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 26 ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.