ಗೋಣಿಕೊಪ್ಪಲು, ಜು. 2: ಗೋಣಿಕೊಪ್ಪಲುವಿನ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಿ.ಕೆ.ಬೋಪಣ್ಣ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಿಸ್ಕತ್ತು ವಿತರಿಸಿದರು. ಗೋಣಿಕೊಪ್ಪಲುವಿನ ಅನುದಾನಿತ ಪ್ರೌಢ ಶಾಲೆ ಹಾಗೂ ಗೋಣಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಪರೀಕ್ಷಾ ಕೇಂದ್ರಕ್ಕೆ ತೆರಳಿದ ಬೋಪಣ್ಣ ನೂರಾರು ವಿದ್ಯಾರ್ಥಿಗಳಿಗೆ ಬಿಸ್ಕತ್ತು ವಿತರಿಸಿದರು. ಕೊರೊನಾ ಭಯದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಮುಂಜಾನೆ ಗೋಣಿಕೊಪ್ಪಲು, ಜು. 2: ಗೋಣಿಕೊಪ್ಪಲುವಿನ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಿ.ಕೆ.ಬೋಪಣ್ಣ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಿಸ್ಕತ್ತು ವಿತರಿಸಿದರು. ಗೋಣಿಕೊಪ್ಪಲುವಿನ ಅನುದಾನಿತ ಪ್ರೌಢ ಶಾಲೆ ಹಾಗೂ ಗೋಣಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಪರೀಕ್ಷಾ ಕೇಂದ್ರಕ್ಕೆ ತೆರಳಿದ ಬೋಪಣ್ಣ ನೂರಾರು ವಿದ್ಯಾರ್ಥಿಗಳಿಗೆ ಬಿಸ್ಕತ್ತು ವಿತರಿಸಿದರು. ಕೊರೊನಾ ಭಯದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಮುಂಜಾನೆ ಭವಿಷ್ಯದ ಹಿತ ದೃಷ್ಟಿಯಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯ್ತಿಯ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಬೆಳಗಿ, ನೋಡಲ್ ಅಧಿಕಾರಿಗಳಾದ ಅಯ್ಯಪ್ಪ, ಪರೀಕ್ಷಾ ಕೇಂದ್ರ ಅಧೀಕ್ಷಕರು, ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.