ಸಿದ್ದಾಪುರ, ಜ. 2: ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಾನ್ ಪೆರೆರಾ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ ಅವರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವೃತ್ತ ನಿರೀಕ್ಷಕ ಮೇದಪ್ಪ ಹಾಗೂ ಸಿಬ್ಬಂದಿಗಳು ಹಾಜರಿದ್ದರು.