ಶನಿವಾರಸಂತೆ, ಜು. 2: ಕೊಡ್ಲಿಪೇಟೆ ಹೋಬಳಿಯ ದೊಡ್ಡಕೊಡ್ಲಿ ಗ್ರಾಮದ ನಿವಾಸಿ ಇದ್ರಿಸ್ ಪಾಶ ಎಂಬವರಿಗೆ ಕ್ಷುಲ್ಲಕ ಕಾರಣಕ್ಕೆ ಖುದ್ದೂಸ್ ಎಂಬಾತ ಹಲ್ಲೆ ನಡೆಸಿದ್ದು, ಗಾಯಗೊಂಡ ಇದ್ರಿಸ್ ಪಾಶ ಕೊಡ್ಲಿಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಹಾಸನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.