ಮಡಿಕೇರಿ, ಜು. 4: ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ ಸಂದರ್ಭ ಜಿಲ್ಲೆಯ ಹಲವೆಡೆಗಳಲ್ಲಿ ಝೂಮ್ ಆ್ಯಪ್ ಮೂಲಕ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಭಾಗಿಗಳಾಗಿದ್ದರು.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೂತನ ಕಛೇರಿ ಉದ್ಘಾಟನೆಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಡೊಡ್ಡಟ್ಟಿ ಚೌಕಿಯ ಬಳಿಯ ಕಟ್ಟಡದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೂತನ ಕಚೇರಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರಾದ ಪಟ್ಟದ ರಂಜಿ ಪೂಣಚ್ಚ ಉದ್ಘಾಟಿಸಿದರು. ಕಾರ್ಯಕರ್ತರ ಸಮಸ್ಯೆಗಳು, ಪಕ್ಷದ ಕಾರ್ಯಕ್ರಮಗಳಿಗೆ ಚುರುಕು ನೀಡಲು ಪಕ್ಷ ಸಂಘಟನೆಗೆ ಒತ್ತು ನೀಡಲು ಕಛೇರಿ ಅರಂಭಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಥ್ವಿನಾಥ್, ಮೊಹಮ್ಮದ್ ರಾಫಿ, ಡಿ.ಪಿ ರಾಜೇಶ್, ನಗರ ಕಾಂಗ್ರೆಸ್ ಅಧÀ್ಯಕ್ಷ ಮೋಹನ್ ಕುಮಾರ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷೀತ್ ಚೆಂಗಪ್ಪ, ವೀರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಫಾರೂಖ್, ಮತ್ತು ವಿವಿಧ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.ಅಮ್ಮತ್ತಿ ಕಾರ್ಮಾಡು ವಲಯ ಕಾಂಗ್ರೆಸ್ ವತಿಯಿಂದ ಪದಗ್ರಹಣ ಕಾರ್ಯಕ್ರಮವನ್ನು ನೇರ ವೀಕ್ಷಣೆ ಮಾಡಲಾಯಿತು.

ಈ ಸಂದರ್ಭ ಕಾರ್ಮಾಡು ವಲಯ ಕಾಂಗ್ರೆಸ್ ಅಧÀ್ಯಕ್ಷರಾದ ಕುಟ್ಟಂಡ ಕೃಷ್ಣ, ಪ್ರಧಾನ ಕಾರ್ಯದರ್ಶಿ ಆಂತೋಣಿ ಪಿ.ಜೆ., ವೀರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಕೆ.ಎಂ. ಹಂಸ, ಮಹಿಳಾ ಕಾಂಗ್ರೆಸ್ ಮುಖಂಡರಾದ ಸರೋಜಿನಿ ಮತ್ತಿತರರು ಪಾಲ್ಗೊಂಡಿದ್ದರು.ಸಿದ್ದಾಪುರ

ಸಿದ್ದಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದರು. ಗ್ರಾ.ಪಂ. ಅಧ್ಯಕ್ಷ ಮಣಿ, ವಲಯ ಕಾಂಗ್ರೆಸ್ ಅಧ್ಯಕ್ಷ ಮೂಸ ಹಾಗೂ ಇತರರು ಹಾಜರಿದ್ದರು.ಡಿ.ಕೆ. ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪದಗ್ರಹಣ ಸ್ವೀಕಾರ ಕಾರ್ಯಕ್ರಮವನ್ನು ತಿತಿಮತಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ. ಆರ್. ಪಂಕಜ ಮನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ವೀಕ್ಷಣೆ ಮಾಡಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡರಾದ ವಿನಯ್‍ಕುಮಾರ್, ಶಿವಕುಮಾರ್ ಸೇರಿದಂತೆ ಕಾರ್ಯಕರ್ತರು ಟಿ.ವಿ ಮೂಲಕ ವೀಕ್ಷಿಸಿದರು. ಜಿ.ಪಂ. ಸದಸ್ಯೆ ಪಂಕಜ ದೀಪ ಬೆಳಗಿಸಿ ಉದ್ಘಾಟಿಸಿದರು.ನಾಪೆÇೀಕ್ಲು ಬ್ಲಾಕ್, ನರಿಯಂದಡ ವಲಯ ಪ್ರತಿಜ್ಞಾ ದಿನ ಕಾರ್ಯಕ್ರಮ ವಲಯ ಅಧ್ಯಕ್ಷರಾದ ವಿನೋದ್ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಶಾಫಿ. ಮಣಿ ಅಯ್ಯಮ್ಮ ಡಿಸಿಸಿ ಸದಸ್ಯರು, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಸದಸ್ಯರಾದ ಹಾರಿಸ್ ಎಡಪಾಲ, ನಾಪೆÇೀಕ್ಲು, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ವಿಭಾಗದ ಸದಸ್ಯರಾದ ಸುಬಿರ್ ಕಡಂಗ, ಬಶೀರ್ ಎಡಪಾಲ, ಮಹಮ್ಮದ್ ಕಡಂಗ, ವಿಠ್ಠಲ, ಕುಂಞ ಅಹಮ್ಮದ್, ಇಬ್ರಾಹಿಂ, ಮತ್ತು ಈ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಮಡಿಕೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ವೀಕ್ಷಣೆಯನ್ನು ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜನಾಬ್ ಸೈಯೆದ್ ಅಹ್ಮದ್ ಅವರ ನಿರ್ದೇಶನ ಮೇರೆಗೆ ದುಃಹ್‍ನೊಂದಿಗೆ ಆರಂಭಿಸಲಾಯಿತು.

ನಗರದ ಹಿಲ್ ರೋಡ್‍ನ ಭಾಷಾ ಅವರ ನೂತನ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ವೀಕ್ಷಕ ಹಾಗೂ ಕೆಪಿಸಿಸಿ ಸಂಯೋಜಕ ವೆಂಕಪ್ಪ ಗೌಡರು ಮತ್ತು ಕಾಂಗ್ರೆಸ್ ಮುಖಂಡ ಚಂದ್ರಮೌಳಿ, ಡಿಸಿಸಿ ಅಧ್ಯಕ್ಷ ಮಂಜುನಾಥ್ ಭೇಟಿ ನೀಡಿ ಶುಭ ಹಾರೈಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ. ಎ. ಉಸ್ಮಾನ್, ಜಿಲ್ಲಾ ಕಾರ್ಯದರ್ಶಿ ಕೆ. ಎಂ. ಸೈಯೆದ್ ಭಾವ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಲೀಲ್ ಭಾಷಾ, ಎನ್‍ಎಸ್‍ಯುಐ ಉಪಾಧ್ಯಕ್ಷರಾದ ಹ್ಯಾರಿಸ್ ಉಸ್ಮಾನ್, ಮುನೀರ್ ಮಚಾರ್, ಮುಸ್ತಾಫಾ ಮಡಿಕೇರಿ, ನೌಷಾದ್ ಮೀಡಿಯಾ ಸೊಂಟಿಕೊಪ್ಪ, ಮತ್ತು ಕೊಡಗು ಕಾಂಗ್ರೆಸ್ ಜಿಲ್ಲಾ ಸಮಿಯ ಅಲ್ಪಸಂಖ್ಯಾತ ಘಟಕದ ಸದಸ್ಯರು ಹಾಜರಿದ್ದರು.ಮಾಯಮುಡಿ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕೆಪಿಸಿಸಿ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭದ ‘ನೇರಪ್ರಸಾರ ವೀಕ್ಷಣೆ’ ಕಾರ್ಯಕ್ರಮ ಮಾಜಿ ಎಂ.ಎಲ್.ಸಿ. ಸಿ.ಎಸ್. ಅರುಣ್ ಮಾಚಯ್ಯ ಹಾಗೂ ಇತರರ ಉಪಸ್ಥಿತಿಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷ ಯಾವುದೇ ಒಂದು ಸೀಮಿತ ಸಮುದಾಯಕ್ಕೆ ಮಾತ್ರ ಸೇರಿದ ಆಸ್ತಿಯಲ್ಲ. ಕಾಂಗ್ರೆಸ್ಸಿನ ತತ್ವ-ಸಿದ್ಧಾಂತ ಒಂದು ವರ್ಗಕ್ಕೆ ಮತ್ತು ಒಂದು ಧರ್ಮಕ್ಕೆ ಸೀಮಿತವಾಗದೆ ದೇಶದ ಎಲ್ಲಾ ಸಮುದಾಯದವರು ಒಪ್ಪಬಹುದಾದ ಸ್ವೀಕಾರಯೋಗ್ಯವಾದದ್ದು. ಜನರ ವಿಶ್ವಾಸವೇ ಕಾಂಗ್ರೆಸ್ ಪಕ್ಷದ ಜೀವಾಳ ಎಂದು ಅರುಣ್ ಮಾಚಯ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಎನ್.ಪ್ರಥ್ಯು, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಎ.ಎಸ್.ಟಾಟು ಮೊಣ್ಣಪ್ಪ, ಸಣ್ಣುವಂಡ ಎಂ. ವಿಶ್ವನಾಥ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಯಮುಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ. ಚಿಣ್ಣಪ್ಪ, ಕಾಂಗ್ರೆಸ್ ಮುಖಂಡ ಮತ್ತು ರೈತ ನಾಯಕ ಪುಚ್ಚಿಮಾಡ ರಾಯಿ ಮಾದಪ್ಪ, ಮಾಯಮುಡಿ ವಿ.ಎಸ್.ಎಸ್.ಎನ್ ನಿರ್ದೇಶಕರಾದ ರಮೇಶ್ ಮಾಯಮುಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಬಿ. ಮಂಜುಳಾ, ಗ್ರಾಮ ಪಂಚಾಯತಿ ಸದಸ್ಯರಾದ ಎ.ಎಸ್. ನಾಚಯ್ಯ, ಶಬರೀಶ್, ಗೌರಿ ರಾಮು, ಶಾಂತ, ಮಣಿಕುಂಜ್ಹ, ರುಕ್ಮಣಿ ಸುಂದರ, ಪೆÇನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕೊಣಿಯಂಡ ಮುತ್ತಣ್ಣ ಸೇರಿದಂತೆ ಮಾಯಮುಡಿ ವಲಯದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಪಿಸಿಸಿ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭವನ್ನು ನೇರ ಪ್ರಸಾರ ವೀಕ್ಷಿಸಿದರು. ಸುಂಟಿಕೊಪ್ಪ

ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭವನ್ನು ಸುಂಟಿಕೊಪ್ಪ, ಕೊಡಗರಹಳ್ಳಿ, ಹಾಗೂ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಝೂಮ್ ಆ್ಯಪ್ ಮೂಲಕ ವೀಕ್ಷಣೆ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಸುಂಟಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ಝೂಮ್ ಆ್ಯಪ್ ಅಧಿಕಾರ ಪದಗ್ರಹಣ ವೀಕ್ಷಣಾ ವ್ಯವಸ್ಥೆಗೊಳಿಸಲಾಗಿತ್ತು ನಗರಾಧ್ಯಕ್ಷ ಕೆ.ಐ. ರಫೀಕ್, ಗ್ರಾ.ಪಂ.ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಪಂಚಾಯಿತಿ ಸದಸ್ಯರಾದ ರಜಾಕ್, ಗ್ರಾ.ಪಂ. ಮಾಜಿ ಅಧ್ಯಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಎಫ್.ಸಬಾಸ್ಟೀನ್, ಹಿರಿಯ ಮುಖಂಡರುಗಳಾದ ಎಂ.ಕೆ.ಪೆಮ್ಮಯ್ಯ, ಎಂ.ಎ.ವಸಂತ, ಪರಿಶಿಷ್ಟಜಾತಿ- ಪರಿಶಿಷ್ಟ ಪಂಗಡದ ಅಧ್ಯಕ್ಷ ಎಂ.ಎಸ್.ರವಿ, ಮಾಹಿತಿ ತಂತ್ರಜ್ಞಾನ ವಿಭಾಗದ ರಾಸಿಕ್, ನಾಸೀರ್ ಹಾಗೂ ಕಾರ್ಯಕರ್ತರು ಇದ್ದರು.

ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪದಗ್ರಹಣದ ಹಿನ್ನೆಲೆ ಕೊಡಗರಹಳ್ಳಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕೊಡಗರಹಳ್ಳಿ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷರಾದ ಕುಂಜಿಲನ. ಎಸ್. ಮಂಜುನಾಥ್ ನೇತೃತ್ವದಲ್ಲಿ ಝೂಮ್ ಆ್ಯಪ್ ಅಧಿಕಾರ ಪದಗ್ರಹಣ ವೀಕ್ಷಣೆ ಮಾಡಿದರು ನಂತರ ಕುಂಜಿಲನ. ಎಸ್. ಮಂಜುನಾಥ್ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಸದಸ್ಯರಾದ ಕುಟ್ಟಪ್ಪ, ಅಬೂಬ್ಬಕ್ಕರ್, ಕುಂಞಮೊಯ್ದು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.