ಮಡಿಕೇರಿ, ಜು. 3: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ ಹೊಟೇಲ್, ಲಾಡ್ಜ್, ಹೋಂ ಸ್ಟೇ ಮತ್ತು ರೆಸಾರ್ಟ್‍ಗಳಲ್ಲಿರುವ ಸಿಬ್ಬಂದಿಗಳು ತಂಗಿರುವವರು ಮತ್ತು ಪ್ರವಾಸಿ ವ್ಯಕ್ತಿಗಳ ಗಂಟಲು, ಮೂಗು ದ್ರವ ಮಾದರಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಾಗಿರುವದರಿಂದ ಜಿಲ್ಲೆಯಲ್ಲಿರುವ ಎಲ್ಲಾ ಹೊಟೇಲ್, ಲಾಡ್ಜ್, ಹೋಂ ಸ್ಟೇ, ರೆಸಾರ್ಟ್‍ನವರು ಸಹಕರಿಸಬೇಕೆಂದು ಈ ಪರೀಕ್ಷೆ ನಡೆಸಲು ನೋಡೆಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.