ಮಡಿಕೇರಿ, ಜು. 4: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2020-21ನೇ ಸಾಲಿಗೆ ಕೊಡಗು ಜಿಲ್ಲೆಯ ಎರಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ 19 ಬಾಲಕ ಮತ್ತು 19 ಬಾಲಕಿಯರಿಗೆ ಶೇ. 75 ಮೀಸಲಾತಿಯಡಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಠ ಪಂಗಡ ಮತ್ತು ಪ.ಜಾತಿಗೆ ಸೇರಿದ 12 ವಿದ್ಯಾರ್ಥಿಗಳಿಗೆ ಶೇ. 25 ಮೀಸಲಾತಿಯಡಿ ಪ್ರವೇಶಕ್ಕೆ ಅವಕಾಶವಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯ ಖ್ಯಾತೆ ಗ್ರಾಮದಲ್ಲಿ 1 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರೂ. 5 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ವೀರಾಜಪೇಟೆ ತಾಲೂಕಿನ ಪೆರುಂಬಾಡಿ ಗ್ರಾಮದಲ್ಲಿ 1 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರೂ. 12 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.
6 ರಿಂದ 10ನೇ ತರಗತಿವರೆಗಿನ ವಿದ್ಯಾಥಿಗಳಿಗೆ ಪ್ರವೇಶ ಪಡೆಯಬಹುದು. ಉಚಿತ ಹಾಸಿಗೆ ಮತ್ತು ಹೊದಿಕೆ, ಟ್ರಂಕ್ ಮತ್ತು ಉಚಿತ ಶುಚಿ ಕಿಟ್ ಒದಗಿಸಲಾಗುವುದು. ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ, ಉಚಿತ ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತ ವೈದ್ಯಕೀಯ ಸೌಲಭ್ಯ-ಪ್ರತಿ ಎರಡು ತಿಂಗಳಿಗೊಮ್ಮೆ ಕ್ಷೌರ ವೆಚ್ಚ ರೂ. 60 ರಂತೆ, ವಿದ್ಯಾರ್ಥಿಗಳಿಗೆ ಉಚಿತ ವಸತಿಯೊಂದಿಗೆ ಮಾಸಿಕ ರೂ. 1500 ಭೋಜನಾ ವೆಚ್ಚ ಭರಿಸಲಾಗುವುದು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿ - ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಇದೆ. ಅಗತ್ಯ ಮಾಹಿತಿಗಾಗಿ ವಸತಿ ಶಾಲೆಯ ದೂರವಾಣಿ ಸಂಖ್ಯೆ: 08274-298956 (ವೀರಾಜಪೇಟೆ) 9741209826 ಮತ್ತು 7676473767 (ಸೋಮವಾರಪೇಟೆ) ದೂರವಾಣಿ ಸಂಖ್ಯೆ: 08272-220214/225528 ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.