ಮಡಿಕೇರಿ, ಜು. 4: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 6 ರಿಂದ 19 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡುತ್ತದೆ. ಪ್ರಕರಣವು ಆಗಸ್ಟ್ 2019 ರಿಂದ ಜುಲೈ, 2020ರ ಒಳಗೆ ನಡೆದಿರಬೇಕು. 2002ರ ಆಗಸ್ಟ್, 01 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. 2020-21 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಕನ್ನಡ ಆವೃತ್ತಿಯ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ(ದೂ.ಸಂ : 08272-298379) ಇಲ್ಲಿಗೆ ಆಗಸ್ಟ್, 20 ರೊಳಗೆ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ಅವರು ತಿಳಿಸಿದ್ದಾರೆ.