ಕೂಡಿಗೆ ಮೇ 3. ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮದಲ್ಲಿ ನೂತನವಾಗಿ ನಿರ್ಮಿಸಿದ ಕನ್ನಿಕಾ, ಸುಜ್ಯೋತಿ ಎಂಬ ಸುಸಜ್ಜಿತ ಎರಡು ಕುಟೀರಗಳನ್ನು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ನಂತರ ಮಾತನಾಡಿz ರಂಜನ್ ಮುಂದಿನ ದಿನಗಳಲ್ಲಿ ಕಾವೇರಿ ನಿಸರ್ಗಧಾಮದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ವ್ಯವಸ್ಥೆಯನ್ನು ಒದಗಿಸಲು ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಅಜಯ್ ಮಿಶ್ರಾ ಅಪರ ಅರಣ್ಯ ಸಂರಕ್ಷಣಾ ಅಧಿಕಾರಿ ಜಗನ್ನಾಥ ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಕೆ ವಿ ನೆಹರು ಸೇರಿದಂತೆ ಜಿಲ್ಲೆಯ ಎಲ್ಲಾವಲಯ ವಿಭಾಗದ ವಲಯಾ ಅಧಿಕಾರಿಗಳು ಮತ್ತು ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಶಾಸಕರು ಮತ್ತು ಅಧಿಕಾರಿ ವರ್ಗದವರು ಕಾವೇರಿ ನಿಸರ್ಗಧಾಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟರು. ಇದೇ ವೇಳೆ ಸಹಾಯಕ ಸಿಬ್ಬಂದಿ ವರ್ಗದವರಿಗೆ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು.