ಸೋಮವಾರಪೇಟೆ, ಜು. 4: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರು ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿರುವ ಕೇಂದ್ರ ಹಾಗೂ ಓಎಲ್‍ವಿ ಪರಿಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಿ ಯೋಗ ಕ್ಷೇಮ ವಿಚಾರಿಸಿದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು, ಪರೀಕ್ಷಾ ಮೇಲ್ವಿಚಾರಕ ಯೂಬರ್ಟ್, ಬಿಆರ್‍ಪಿ ವಿಜಯಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಚಂದ್ರಕಲಾ, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.