ಪಾಲಿಬೆಟ್ಟ, ಜು. 3: ಪಾಲಿಬೆಟ್ಟ ಸುತ್ತಮುತ್ತ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಕ್ಕೆ ವರ್ತಕರು ಬೆಂಬಲ ಸೂಚಿಸಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ವ್ಯಾಪಾರ ವಹಿವಾಟು ನಡೆಸಲು ತೀರ್ಮಾನಿಸಿದ್ದಾರೆ.
ವರ್ತಕರ ಸಭೆಯಲ್ಲಿ ಎಲ್ಲರೂ ಕೈ ಜೋಡಿಸಿ ಸಹಕಾರ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ನಿರ್ಧರಿಸಲಾಯಿತು.
ಈ ಸಂದರ್ಭ ವರ್ತಕರಾದ ಅಬುಬಕ್ಕರ್, ರಫೀಕ್, ವೇಣು ರೈ, ಅಬ್ದುಲ್ ರಜಾಕ್, ವಿಜೇಶ್ ಸೇರಿದಂತೆ ಮತ್ತಿತರರು ಇದ್ದರು.