ಮಡಿಕೇರಿ, ಜು. 5: ಬಿಜೆಪಿ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸಲು ಜಿಲ್ಲೆಯ ಜ್ವಲಂತ ಸಮಸ್ಯೆಗಳು, ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಪರಿಹಾರ ಕಲ್ಪಿಸದಿರುವುದು ಸೇರಿದಂತೆ ಹಲವಾರು ವಿಷಯಗಳಿವೆ, ಅದನ್ನು ಬಿಟ್ಟು ಸರಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಸಂಚಾಲಕ ಅಬ್ದುಲ್ ರಜಾಕ್, ವಿ.ಪಿ.ಶಶಿಧರ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ನವೀದ್ ಖಾನ್, ಉಪಾಧ್ಯಕ್ಷ ಕೆ.ಪಿ.ರಾಘವೇಂದ್ರ, ಮಡಿಕೇರಿ ತಾಲೂಕು ಅಧ್ಯಕ್ಷ ರಿಜ್ವಾನ್, ಕುಶಾಲನಗರ ಅಧ್ಯಕ್ಷ ಬಿ.ಜೆ. ನವೀನ್ ಕುಮಾರ್ ಹಾಗೂ ವೀರಾಜಪೇಟೆ ತಾಲೂಕು ಅಧ್ಯಕ್ಷ ಸಿದ್ದಿಕ್ ಉಪಸ್ಥಿತರಿದ್ದರು.