ಕೂಡಿಗೆ, ಜು. 5: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಮಾದ್ಯಮ ಶಾಲೆಗೆ ಹೋಗುವ ರಸ್ತೆಯ ಕಾಮಗಾರಿ ಪ್ರಾರಂಭಗೊಂಡಿದೆ. ರಸ್ತೆಯ ದುಸ್ಥಿತಿಯಿಂದ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಸೇರಿದಂತೆ ಇತರರೂ ಪರದಾಡುವಂತೆ ಆಗಿತ್ತು. ವಿದ್ಯಾರ್ಥಿಗಳ ಪೋಷಕರ ಮನವಿಗೆ ಸ್ಪಂದಿಸಿದ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಅದರಂತೆ ಕ್ರಿಯಾ ಯೋಜನೆ ಅನುಗುಣವಾಗಿ ರೂ. 5ಲಕ್ಷ ವೆಚ್ಚದ ಹಣದಲ್ಲಿ ಡಾಂಬರೀಕರಣ ಕಾಮಗಾರಿಯು ಪ್ರಾರಂಭವಾಗಿದೆ.