ಕೂಡಿಗೆ, ಜು. 5: ಶಿರಂಗಾಲದ ಮಂಟಿಗಮ್ಮ ದೇವಾಲಯ ಸಮಿತಿಯ ವತಿಯಿಂದ ಶಿರಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ. 30 ಸಾವಿರವನ್ನು ದತ್ತಿ ನಿಧಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಮಿತಿಯ ವತಿಯಿಂದ ಹಸ್ತಂತರಿಸಲಾಗಿದೆ.

ಈ ನಿಧಿಯ ಹಣದಿಂದ ಶಾಲೆಯ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಈ ಹಣದಿಂದ ಬರುವ ಬಡ್ಡಿ ಹಣವನ್ನು ಪೆÇ್ರೀತ್ಸಾಹ ಬಹುಮಾನವಾಗಿ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಸಿ. ರುದ್ರಪ್ಪ, ಕಾರ್ಯದರ್ಶಿ ಮಹೇಶ್, ಶಿರಂಗಾಲ ಸಹಕಾರ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ ಸೇರಿದಂತೆ ದೇವಾಲಯ ಸಮಿತಿಯ ನಿರ್ದೇಶಕರು ಮತ್ತು ಶಾಲೆಯ ಶಿಕ್ಷಕರು ಹಾಜರಿದ್ದರು.