ಮಡಿಕೇರಿ, ಜು. 5: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ನಗರ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಶಿವಶರಣ ಹಡಪದ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪುಷ್ಪಾರ್ಚಣೆ ಮಾಡಿ ಗೌರವ ನಮನ ಸಲ್ಲಿಸಿದರು.