ಮಡಿಕೇರಿ, ಜು. 5: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದಿಂದ ನೂತನ ಪ್ರವೇಶ ದ್ವಾರದ ಗೇಟ್ ಉದ್ಘಾಟನೆ ಹಾಗೂ ಸುದ್ದಿ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ತಾ. 6 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಆವರಣದಲ್ಲಿ ನಡೆಯಲಿದೆ.

ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಪಾಲ್ಗೊಳ್ಳಲಿದ್ದು, ಸುದ್ದಿ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಹಾಗೂ ಕಾಲೇಜು ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.