ಮಡಿಕೇರಿ ಜು. 5: ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರಾಗಿ ಹಿತ್ಲುಗದ್ದೆ ಗ್ರಾಮದ ಐರೀರ ಎ.ಜಿ.ವಿಜಯ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.