ವೀರಾಜಪೇಟೆ, ಜು. 6: ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಆರ್ಜಿ ಮತ್ತು ಬಾಳುಗೋಡು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ತಾ.8 ರಂದು ಕೈಗೊಂಡಿದ್ದು, ಆರ್ಜಿ ಮತ್ತು ಬಾಳುಗೋಡು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ತೋಟದ ಕಾರ್ಮಿಕರು ಎಚ್ಚರಿಕೆಯಿಂದ ಇದ್ದು ಇಲಾಖಾ ಕಾರ್ಯಾಚರಣೆಗೆ ಸಹಕರಿಸಬೇಕೆಂದು ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.