ಸೋಮವಾರಪೇಟೆ, ಜು. 7: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ವತಿಯಿಂದ ಸ್ಥಳೀಯ ಬೇಳೂರು ಗ್ರಾಮದಲ್ಲಿರುವ ಶ್ರೀ ಬಸವ ವೃದ್ಧಾಶ್ರಮದ ವೃದ್ಧರಿಗೆ ಸಿಹಿ ಹಾಗೂ ಆರೋಗ್ಯ ಕಿಟ್‍ಗಳನ್ನು ವಿತರಿಸಲಾಯಿತು. ಬಿಜೆಪಿ ನಗರಾಧ್ಯಕ್ಷ ಸೋಮೇಶ್, ಪ.ಪಂ. ಸದಸ್ಯರಾದ ಪಿ.ಕೆ. ಚಂದ್ರು, ಮಹೇಶ್, ಪ್ರಮುಖರಾದ ಉಷಾ ತೇಜಸ್ವಿ, ಸುಮಾ ಸುದೀಪ್, ಕಿಬ್ಬೆಟ್ಟ ಮಧು, ಮಸಗೋಡು ಸತೀಶ್, ಜಗನ್ನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.