ಮಡಿಕೇರಿ, ಜು. 8: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ.ಸೋಮವಾರಪೇಟೆ ತಾಲೂಕಿನ ಕುಶಾಲನಗರದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರು ಮಹಾರಾಷ್ಟ್ರದಿಂದ ಬಂದಿದ್ದು, ಇವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲೂಕಿನ ಚೇರಂಬಾಣೆಯ 77 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಹೆಚ್ಚಿನ ಅನಾರೋಗ್ಯ ಕಂಡುಬಂದ ಕಾರಣ ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ವೀರಾಜಪೇಟೆ ತಾಲೂಕು ಅರ್ಜಿ ಗ್ರಾಮದಲ್ಲಿ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ 8 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ. ಮಡಿಕೇರಿ ತಾಲೂಕಿನ ಮೂರ್ನಾಡುವಿನಲ್ಲಿ ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 45 ವರ್ಷದ ಆರೋಗ್ಯ ಕಾರ್ಯಕರ್ತಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಹೊಸದಾಗಿ ಮಡಿಕೇರಿ ತಾಲೂಕಿನ ಚೇರಂಬಾಣೆಯಲ್ಲಿ ಹಾಗೂ ಮೂರ್ನಾಡು ಆರೋಗ್ಯ ಇಲಾಖೆಯ ವಸತಿ ಗೃಹ ಪ್ರದೇಶದಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ: 96ಕ್ಕೇರಿದ್ದು, 16 ಪ್ರಕರಣ ಗುಣಮುಖವಾಗಿರುತ್ತದೆ. ಮೃತಪಟ್ಟ ಪ್ರಕರಣ-1 ಮತ್ತು 79 ಪ್ರಕರಣಗಳು ಸಕ್ರಿಯವಾಗಿರುತ್ತದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ
ಒಟ್ಟು-38 ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.