ಕೂಡಿಗೆ, ಜು. 8: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ಕೂಡಿಗೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ರಸ್ತೆಯ ಆನೆಕರೆ ಮಾರ್ಗವಾಗಿ ಹೋಗುವ ರಸ್ತೆಯು ಗುಂಡಿಬಿದ್ದು ಕೆಸರುಮಯವಾಗಿದ್ದ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್. ಮಂಜುಳಾ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಕಲ್ಲು ಮಿಶ್ರಿತ ಪುಡಿ ಮತ್ತು ಕಲ್ಲುಗಳನ್ನು ಹಾಕಿ ಸಾರ್ವಜನಿಕರು ತಿರುಗಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಮಳೆಗಾಲದ ನಂತರ ಡಾಂಬರೀಕರಣ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ತಿಳಿಸಿದ್ದಾರೆ.