ಸಿದ್ದಾಪುರ, ಜು. 7: ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹ ಪೀಡಿತ ನೆಲ್ಲಿಹುದಿಕೇರಿ, ಕುಂಬಾರ ಗುಂಡಿ ಹಾಗೂ ಸಿದ್ದಾಪುರದ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲೆಯ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕಳೆದ 4 ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯು ತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪೆÇಲೀಸ್ ಇಲಾಖೆ ಯಿಂದ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ವರಿಷ್ಠಾಧಿಕಾರಿ ಅವರು ಭೇಟಿ ನೀಡಿ ವೃತ್ತ ನಿರೀಕ್ಷಕ ಮೇದಪ್ಪ ಅವರ ಬಳಿ ಮಾಹಿತಿ ಪಡೆದುಕೊಂಡರು. ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಜರಿದ್ದರು.