ಮಡಿಕೇರಿ, ಜು. 8: ಕೊರೊನಾ ವೈರಸ್ (ಕೋವಿಡ್-19) ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರ್ನಾಡು ಗ್ರಾಮದಲ್ಲಿ ತಾ.9ರಿಂದ (ಇಂದಿನಿಂದ) ಮುಂದಿನ ಆದೇಶದವರೆಗೆ ಸಂತೆಯನ್ನು ರದ್ದುಪಡಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.