ಮಡಿಕೇರಿ, ಜು. 7: ಬೇತ್ರಿಯ ಕಾವೇರಿ ಹೊಳೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಅಂದಾಜು 60 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬೇತ್ರಿಯ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ ವೇಳೆ ಕೊಂಡಂಗೇರಿಯಲ್ಲಿ ಶವ ಪತ್ತೆಯಾಗಿದ್ದು, ಅಲ್ಲಿನ ಯುವಕರು ಶವವನ್ನು ಮೇಲೆತ್ತಿದ್ದಾರೆ. ಮೃತ ವ್ಯಕ್ತಿ ಯಾರೆಂಬುದು ತಿಳಿದು ಬಂದಿಲ್ಲ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.