ಸೋಮವಾರಪೇಟೆ,ಜು.7: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಸಾರ್ವಜನಿಕ ತಡೆಗೋಡೆಯ ಮೇಲೆ ನಿರ್ಮಿಸಲಾಗಿರುವ ಮನೆಯ ಭಾಗವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಆದೇಶ ನೀಡಿದ್ದಾರೆ.
ತಣ್ಣೀರುಹಳ್ಳ ಗ್ರಾಮದ ಪುಟ್ಟಮ್ಮ ಎಂಬವರಿಗೆ 2017-18ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಮಂಜೂರಾದ ಮನೆಯನ್ನು ಸಾರ್ವಜನಿಕ ತಡೆಗೋಡೆಯ ಮೇಲೆ ನಿರ್ಮಿಸಲಾಗಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ಗ್ರಾಮದ ಸದಾನಂದ ಸೇರಿದಂತೆ ಕೆಲ ಗ್ರಾಮಸ್ಥರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದರು.
ಅದರಂತೆ ಪರಿಶೀಲನೆ ನಡೆಸಿದ ತಾ.ಪಂ. ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರು, ಉದ್ಯೋಗ ಖಾತ್ರಿ ಯೋಜನೆಯಡಿ ತಣ್ಣೀರು ಹಳ್ಳದ ತನಿಯಾರು ಮನೆಯಿಂದ ಬಸವರಾಜು ಅವರ ಮನೆವರೆಗೆ ತಡೆಗೋಡೆ ನಿರ್ಮಿಸಬೇಕಿದ್ದರೂ, ಗ್ರಾಮ ಪಂಚಾಯಿತಿಯ ಅಧಿಕಾರವನ್ನು ದುರುಪಯೋU Àಪಡಿಸಿಕೊಂಡು ಬಸವರಾಜು ಮನೆಯಿಂದ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ವರದಿ ನೀಡಿದ್ದರು.
ಮುಂದುವರೆದು ತಡೆಗೋಡೆ ಕಾಮಗಾರಿ ಪೂರ್ಣಗೊಂಡ ನಂತರ ಪುಟ್ಟಮ್ಮ ಅವರಿಗೆ ಮಂಜೂರಾದ ಮನೆಯನ್ನು ಸಾರ್ವಜನಿಕ ರಸ್ತೆಗೆ ಹೊಂದಿಕೊಂಡಂತೆ ಇರುವ ತಡೆಗೋಡೆಯ ಮೇಲೆ ಮನೆಯ ಗೋಡೆ ನಿರ್ಮಿಸಿರುವದು ಕಂಡುಬಂದಿದೆ ಎಂದು ವರದಿಯಲ್ಲಿ ತಿಳಿಸಿದ್ದರು. ಈ ಹಿನ್ನೆಲೆ ತಡೆಗೋq Éಯ ಮೇಲೆ ನಿರ್ಮಿಸಿರುವ ಮನೆಯ ಗೋಡೆಯನ್ನು ತಕ್ಷಣ ತೆರವುಗೊಳಿಸ ಬೇಕು. ಇದಕ್ಕೆ ತಗಲುವ ವೆಚ್ಚವನ್ನು ಸಂಬಂಧಿಸಿದವರಿಂದಲೇ ಭರಿಸಲು ಕ್ರಮ ವಹಿಸುವಂತೆ ತಾ.ಪಂ. ಕಾರ್ಯನಿರ್ವ ಹಣಾಧಿಕಾರಿಗಳು, ನೇರುಗಳಲೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ್ದಾರೆ.