ಗೋಣಿಕೊಪ್ಪಲು, ಜು. 7: ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 14 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ತಾಲೂಕು ಆರೋಗ್ಯಾಧಿಕಾರಿಗಳ ವಾಹನ ಚಾಲಕರೊಬ್ಬರಿಗೆ ಕೊರೊನಾ
ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಿ ಎಲ್ಲ ಸಿಬ್ಬಂದಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸೋಂಕು ಕಾಣಿಸಿಕೊಂಡಿರುವ 54 ವರ್ಷದ ಪರುಷರ ಪತ್ನಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ನಂದೀಶ್ ತಿಳಿಸಿದ್ದಾರೆ. -ದಿನೇಶ್