ಕುಶಾಲನಗರ, ಜು. 7: ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕುಶಾಲನಗರ ಕಾವೇರಿ ಪರಿಸರ ಸಂರಕ್ಷಣಾ ಬಳಗದ ಸಹಯೋಗದೊಂದಿಗೆ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸಂಘದ ಸದಸ್ಯರು ಗಿಡ ನೆಟ್ಟರು. ಮಾತನಾಡಿದ ಸಂಘದ ಅಧ್ಯಕ್ಷ ರಘು ಹೆಬ್ಬಾಲೆ, ಪ್ರತಿಯೊಬ್ಬರೂ ಪರಿಸರ ರಕ್ಷಣೆಯ ಬಗ್ಗೆ ಕಾಳಜಿ ಹೊಂದಬೇಕು ಎಂದರು. ಪರಿಸರ ಸಂರಕ್ಷಣಾ ಬಳಗದ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್, ಪತ್ರಕರ್ತರ ಸಂಘದ ಕಾರ್ಯದರ್ಶಿ ವಿನೋದ್, ಪದಾಧಿಕಾರಿಗಳಾದ ವನಿತಾ ಚಂದ್ರಮೋಹನ್, ಕೆ.ಎಸ್. ನಾಗೇಶ್, ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಕಸ್ತೂರಿ ಕನ್ನಡ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಸಹದೇವ್, ಪ್ರಿಯಾಂಕ ಇದ್ದರು.