ಮಡಿಕೇರಿ, ಜು. 7: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಹಾಗೂ ಪೌರ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆ, ಸಮೃದ್ಧತಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣಾ ಯೋಜನೆ, ಸ್ಪೂರ್ತಿ ಯೋಜನೆ, ಪ್ರಬುದ್ಧ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಈ ಯೋಜನೆಯನ್ನು ಅನುಷ್ಠಾನ ಮಾಡಲು 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ತಂತ್ರಾಂಶದಲ್ಲಿ ತಿತಿತಿ.ಞssಞಜಛಿ.ಞಚಿಡಿ.ಟಿiಛಿ.iಟಿ ಅರ್ಜಿ ಆಹ್ವಾನಿಸಲಾಗಿದೆ. (ಸಫಾಯಿ ಕರ್ಮಚಾರಿಗಳು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳು). ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ (ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ), ಹೊಸ ಬಡಾವಣೆ, ರೇಸ್ ಕೋರ್ಸ್, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ : 08272-228857ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮಡಿಕೇರಿ : ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2020ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ. 50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ. 25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ದಿನಾಂಕ 1.7.2020 ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ. 25 ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584 ಇವರನ್ನು ಸಂಪರ್ಕಿಸಬಹುದು.
ಮಡಿಕೇರಿ : ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶೇಷಚೇತನರಿಗಾಗಿ ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ವಿಶೇಷಚೇತನರಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ, ಸಾಧನ ಸಲಕರಣೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ಮಹಿಳೆಗೆ ಜನಿಸುವ ಮಕ್ಕಳ ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಶೇಷಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹ ಧನ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಎಸ್.ಎಸ್.ಎಲ್.ಸಿ. ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಮತ್ತು ಸ್ವಯಂ ಉದ್ಯೋಗಕ್ಕಾಗಿ ಆಧಾರ ಸಾಲ ಯೋಜನೆ ಹಾಗೂ ನಿರಾಮಯ ಈ ಯೋಜನೆಗಳ ಷರತ್ತುಗಳಂತೆ 2020-21ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829 ಕರೆಮಾಡಿ ಮಾಹಿತಿಗಳನ್ನು ಪಡೆಯಬಹುದಾಗಿದೆ ಮತ್ತು ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಆರ್. ಸಂಪತ್‍ಕುಮಾರ್ ತಿಳಿಸಿದ್ದಾರೆ.