ಸೋಮವಾರಪೇಟೆ,ಜು.7: ಕುಶಾಲನಗರ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಯಡವನಾಡು ಅರಣ್ಯ ಪ್ರದೇಶದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಲೋಕೋಪಯೋಗಿ ಇಲಾಖಾ ಸಿಬ್ಬಂದಿಗಳು ತೆರವುಗೊಳಿಸಿದರು.

ಕಳೆದೆರಡು ದಿನಗಳ ಹಿಂದೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಸಾರ್ವಜನಿಕ ವಾಹನಗಳ ಓಡಾಟಕ್ಕೆ ತೊಂದರೆಯಾಗಿತ್ತು. ಈ ಬಗ್ಗೆ ಕರವೇ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್ ಅವರು ಸಂಬಂಧಿಸಿದ ಲೋಕೋಪಯೋಗಿ ಇಲಾಖಾ ಅಭಿಯಂತರ ಮೋಹನ್‍ಕುಮಾರ್ ಅವರ ಗಮನ ಸೆಳೆದ ಹಿನ್ನೆಲೆ, ತಕ್ಷಣ ಸ್ಪಂದಿಸಿದ ಅಭಿಯಂತರರು, ತಮ್ಮ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿ, ಮರವನ್ನು ತೆರವುಗೊಳಿಸಿದರು.