ಮಡಿಕೇರಿ, ಜು. 10: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವುದರ ಮೂಲಕ ಜನರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದೆ. ದೇಶದ ಜನತೆ ಈಗಾಗಲೇ ಕೊರೊನಾ ಸಂಕಷ್ಟದಿಂದ ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಸಂದರ್ಭ ನಿರಂತರವಾಗಿ ಇಂಧನಗಳ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಕೊಡಗು ಜಿಲ್ಲಾ ಎನ್.ಎಸ್.ಯು.ಐ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ವೈರಸ್ ವ್ಯಾಪಕ ಹರಡುತ್ತಿರುವ ಹಿನ್ನೆಲೆ ವ್ಯಾಪಾರ ವಹಿವಾಟು ನೆಲಕಚ್ಚಿದೆ. ಬಡ, ಮಧ್ಯಮ ವರ್ಗದ ಜನರು ಕೆಲಸವಿಲ್ಲದೆ ದಿನ ಕಳೆಯುತ್ತಿದ್ದಾರೆ. ಯುವಜನತೆ ಕೆಲಸ ಕಳೆದು ಕೊಳ್ಳುತ್ತಿದ್ದಾರೆ.
ಪೆಟ್ರೋಲ್, ಡೀಸೆಲ್ ದರವನ್ನು ಕೂಡಲೇ ಕಡಿಮೆಗೊಳಿಸಿ, ಯುವಜನರಿಗೆ ಉದ್ಯೋಗ ಸೃಷ್ಟಿಸಬೇಕೆಂದು ಎನ್.ಎಸ್.ಯು.ಐ. ಉಪಾಧ್ಯಕ್ಷ ರಾಶಿದ್ ಅಯ್ಯಂಗೇರಿ ಒತ್ತಾಯಿಸಿದ್ದಾರೆ.