ನಾಪೋಕ್ಲು, ಜು. 10: ಯವಕಪಾಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಕಾಡಾನೆಗಳ ಗುಂಪೊಂದು ಮನೆಯ ಬಳಿಗೆ ಬಂದು ನಷ್ಟ ಉಂಟು ಮಾಡಿದೆ. ಎಂದು ಗ್ರಾಮದ ಕೆ.ಎಂ.ರಾಜ ತಿಳಿಸಿದ್ದಾರೆ. ಈ ಬಗ್ಗೆ ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ಕಾಡಾನೆ ಧಾಳಿಯಿಂದ ಉಂಟಾದ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಮನೆಗೆ ಹಾಕಲಾಗಿದ್ದ ಸಿಮೆಂಟ್ ಶೀಟುಗಳನ್ನು ಕಾಡಾನೆಗಳು ನಾಶಪಡಿಸಿವೆ. ಸಮೀಪದ ಕಾಫಿ ಗಿಡಗಳನ್ನು ಧ್ವಂಸ ಮಾಡಿವೆ. ಕಾಡಾನೆ ಧಾಳಿಯಿಂದ ಭಯಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. - ದುಗ್ಗಳ