ನಾಪೆÇೀಕ್ಲು, ಜು. 9: ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ಮೂವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜ್ರಾಗತಾ ಕ್ರಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 6 ಗಂಟೆಯಿಂದ ಅಪರಾಹ್ನ 12 ಗಂಟೆಯವರೆಗೆ ಮಾತ್ರ ನಡೆಸಿ ಉಳಿದ ಸಮಯದಲಿ ಕಡ್ಡಾಯವಾಗಿ ಲಾಕ್ ಡೌನ್ ಮಾಡುವಂತೆ ಗ್ರಾಮ ಪಂಚಾಯಿತಿ ಪ್ರಕಟಣೆ ಹೊರಡಿಸಿದೆ. ಅಲ್ಲದೆ 60 ವರ್ಷ ಮೇಲ್ಪಟ್ಟವರು ಮತ್ತು ಮಕ್ಕಳು ಹೊರಗೆ ಬಾರದಂತೆ ನಿಷೇಧ ಹೇರಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪಿಡಿಒ ಸಚಿನ್ ಪ್ರಕಟಣೆಯಲ್ಲಿ ಕೋರಿದ್ದಾರೆ.