ಕೊಡ್ಲಿಪೇಟೆ, ಜು. 9: ತಾ.10 ರಂದು (ಇಂದು) ನಡೆಯಬೇಕಿದ್ದ ಜುಮುಅ ನಮಾಝ್ (ವಿಶೇಷ ಸಮೂಹಿಕ ಪ್ರಾರ್ಥನೆ )ಅನ್ನು ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಕೊಡ್ಲಿಪೇಟೆ ಮಸ್ಜದುನ್ನೂರ್ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಎ.ಸುಲೈಮಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹನೀಫ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು ಮುಂಜಾಗ್ರತಾ ಕ್ರಮಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಬೆಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್ ನಲ್ಲಿದ್ದು ಸಹಕರಿಸಬೇಕೆಂದು ಆಡಳಿತ ಮಂಡಳಿಯ ಮೂಲಕ ಮನವಿ ಮಾಡಿದ್ದಾರೆ.