ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದವರ ಪೈಕಿ 18 ಮಂದಿ ಗುಣಮುಖರಾಗಿ ಇಂದು ಬಿಡುಗಡೆಗೊಂಡಿದ್ದಾರೆ. ಇದÀರಿಂದಾಗಿ ಒಟ್ಟು 36 ಮಂದಿ ಗುಣಮುಖರಾದಂತಾಗಿದೆ.
ಇತರ ದೇಶ/ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.
ಇತರೆ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.
ಇತರÉ ದೇಶದ ಜನರು- 26, ಇತರ ರಾಜ್ಯದ ಜನರು-442, ಪ್ರಾಥಮಿಕ/ದ್ವಿತೀಯ ಸಂಪರ್ಕಗಳು- 1007
ಇಲ್ಲಿಯವರೆಗೆ ಒಟ್ಟು 10741 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪಾಸಿಟಿವ್ ಪ್ರಕರಣಗಳು- 131, ನೆಗೆಟಿವ್ ವರದಿ ಬಂದ ಪ್ರಕರಣಗಳು-9341, ವರದಿ ನಿರೀಕ್ಷಿತ ಪ್ರಕರಣಗಳು-1269, ಮೃತಪಟ್ಟ ಪ್ರಕರಣಗಳು-1
ದಾಖಲಿರುವ ಪ್ರಕರಣಗಳು: ಕೋವಿಡ್ ಆಸ್ಪತ್ರೆ : 61, ಕೋವಿಡ್ ಕೇರ್ ಸೆಂಟರ್ : 24, ಹೋಂ ಐಸೋಲೇಶನ್ : 27 ಮಂದಿ ಇರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.