ಪಾಲಿಬೆಟ್ಟ, ಜು. 10: ಸೀಲ್ ಡೌನ್ ನಡುವೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೇಕಾದ ಅಗತ್ಯ ಆಹಾರ ಧಾನ್ಯ ವಸ್ತುಗಳನ್ನು ಚೆÀನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಹಾಗೂ ದಾನಿಗಳ ಸಹಕಾರದಿಂದ 250 ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು .
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಮಾತನಾಡಿ, ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.ಕಾರ್ಮಿಕ ಕುಟುಂಬಗಳೆ ಅಧಿಕವಾಗಿರುವ ಹೊಲಮಾಳದಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ನಿವಾಸಿಗಳು ಸಂಕಷ್ಟಕ್ಕೊಳಗಾಗಿರುವ ದನ್ನು ಮನಗಂಡು 250ಕ್ಕೂ ಹೆಚ್ಚು ಕುಟುಂಬಗಳಿಗೆ ಬೇಕಾದ ಆಹಾರ ಧಾನ್ಯಗಳ ಕಿಟ್ಗಳನ್ನು ಗ್ರಾಮ ಪಂಚಾಯಿತಿ ಹಾಗೂ ದಾನಿಗಳ ಸಹಕಾರದಿಂದ ವಿತರಣೆ ಮಾಡಲಾಗಿದೆ. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತ ದೃಷ್ಟಿಯಿಂದ ಜನರು ಸಹಕಾರ ನೀಡಬೇಕೆಂದರು.
ಗ್ರಾಮ ಪಂಚಾಯಿತಿ ಹಾಗೂ ದಾನಿಗಳ ಸಹಕಾರದಿಂದ ಕಿಟ್ ವಿತರಣೆ ಮಾಡಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದಾನಿಗಳು ಕೈಜೋಡಿಸಬೇಕೆಂದು ಮನವಿ ಮಾಡಿದ ಅವರು ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು, ಪೆÇಲೀಸ್ ಇಲಾಖೆ, ಪಿಡಿಒ ಹಾಗೂ ಗ್ರಾಮದ ಯುವಕರುಗಳ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಾಯಿತ್ರಿ,ಸದಸ್ಯರುಗಳಾದ ವಿಜು, ಅರುಣ್ ಕುಮಾರ್, ರಾಶೀದ್ ,ಶಿಲ್ಪ, ಶೀಲಾ, ಜಾನಕಿ, ಕಾವೇರಿ, ಗಣೇಶ್, ಕಾಳಮ್ಮ, ಶಿವಮ್ಮ, ಅಯ್ಯಪ್ಪ , ರತನ್ , ಅಪ್ಪಾಜಿ, ರಾಜು, ಕಮಲಮ್ಮ, ಅಭಿವೃದ್ಧಿ ಅಧಿಕಾರಿ ರಾಜನ್ ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಿನೇಶ್, ಗ್ರಾಮದ ಪ್ರಮುಖರಾದ ರದೀಶ್, ಹರೀಶ್, ಕರುಣಾಕರ್, ವಿನುಕುಮಾರ್, ಮಂಜು, ಅಬ್ದುಲ್ ರೆಹಮಾನ್, ನೌಪಲ್, ಸೀಬು, ಅಯ್ಯಪ್ಪ, ಸ್ವಾಮಿ ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.