ಮಡಿಕೇರಿ, ಜು. 9: ದಿನೇ ದಿನೇ ಕೊರೊನಾ ಪ್ರಕರಣಗಳು ಅಧಿಕಗೊಳ್ಳುತ್ತಿರುವ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಮಡಿಕೇರಿ ನಗರದಲ್ಲಿ ನಡೆಯುವ ಶುಕ್ರವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸಿ ಮುಂದೂಡಲಾಗಿದೆ. ಮಾರುಕಟ್ಟೆಯ ಸುತ್ತಮುತ್ತ, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವುದನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.