ಮಡಿಕೇರಿ, ಜು. 9: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳಿಂದ ಕೋಳಿ ಸಾಕಾಣಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯ ಧನ ಮಂಜೂರು ಮಾಡುವ ಸಂಬಂಧ ಕೊಡಗು ಜಿಲ್ಲೆಗೆ 2 ಗುರಿ ನಿಗದಿಯಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ.ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇಲ್ಲಿಗೆ ತಾ. 27 ರಂದು ಸಂಜೆ 5.30 ಗಂಟೆ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ (ದೂರವಾಣಿ ಸಂಖ್ಯೆ: 08276-281115) ನ್ನು ಸಂಪರ್ಕಿಸಬಹುದು.