ನಾಪೆÇೀಕ್ಲು, ಜು. 9: ನಾಪೆÇೀಕ್ಲು ವಿಭಾಗದ ಬಹುತೇಕ ಕಡೆ ಚರಂಡಿ ವ್ಯವಸ್ಥೆ ಇಲ್ಲ. ಇದೀಗ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಯಲ್ಲೇ ಹರಿಯುವ ನೀರಿನಿಂದ ಜನಸಾಮಾನ್ಯರು ಬವಣೆ ಪಡುವಂತಾಗಿದೆ. ಮುಖ್ಯ ರಸ್ತೆಗೆ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ವಾಹನಗಳು ಸಂಚರಿಸುವಾಗ ಪಾದಚಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯ ಎರಡೂ ಬದಿಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತಾದರೆ ಸಮಸ್ಯೆ ಕಡಿಮೆಯಾಗಲಿದೆ. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಮಳೆನೀರು ಚರಂಡಿಯಲ್ಲಿ ಹರಿಯುವಂತೆ ಮಾಡಿ ಅನುಕೂಲ ಮಾಡಿಕೊಡಬೇಕೆಂದು ನಾಪೋಕ್ಲು ವಾಹನ ಚಾಲಕರು ಹಾಗೂ ಮಾಲಿಕರ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. - ದುಗ್ಗಳ