ಬೆಂಗಳೂರು, ಜು. 10: ಕೋವಿಡ್-19 ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪೆÇ್ಲಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿ ಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣ ಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗ ಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.ಅಂತಿಮ ವರ್ಷ / ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‍ಲೈನ್/ ಆಫ್‍ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ತೇರ್ಗಡೆ ಹೇಗೆ?ಮಧ್ಯಂತರ ಸೆಮಿಸ್ಟರ್/ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (iಟಿಣeಡಿಟಿಚಿಟ mಚಿಡಿಞs) ಮತ್ತು ಹಿಂದಿನ ಸೆಮಿಸ್ಟರ್/ ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಆಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸ ಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಏನೇ ಅನುಮಾನಗಳು ಇದ್ದರೂ ಈ ದೂರವಾಣಿಗೆ ಕರೆ ಮಾಡಬಹುದು. ದೂರವಾಣಿ ಸಂಖ್ಯೆ- 080 22341394

ಸೆಪ್ಟೆಂಬರ್ 1ರಿಂದ ಆನ್‍ಲೈನ್ ತರಗತಿ

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‍ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿಗಳು ಆರಂಭವಾಗುತ್ತವೆ.

ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಯವರು ತಿಳಿಸಿದರು.