ಸಿದ್ದಾಪುರ, ಜು. 9 : ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಗುವೊಂದಕ್ಕೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಗು ಇರುವ ಮನೆಯನ್ನು ಸೀಲ್‍ಡೌನ್ ಮಾಡಲಾಯಿತು. ಮಗುವಿನ ಮನೆ ಸುತ್ತಲೂ ಯಾವುದೇ ಮನೆಗಳಿಲ್ಲದ ಹಿನ್ನೆಲೆಯಲ್ಲಿ ಕೇವಲ ಒಂದು ಮನೆಯನ್ನು ಸೀಲ್‍ಡೌನ್ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು, ಡಿ.ವೈ.ಎಸ್.ಪಿ. ಶೈಲೇಂದ್ರ, ತಾಲೂಕು ಕಾರ್ಯನಿರ್ವಣಾಧಿಕಾರಿ ಸುನಿಲ್ ಕುಮಾರ್, ಗ್ರಾಮಲೆಕ್ಕಿಗ ಸಂತೋಷ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಹಾಜರಿದ್ದರು.