*ಸಿದ್ದಾಪುರ, ಜು.11 : ಅಭ್ಯತ್‍ಮಂಗಲ ಪೈಸಾರಿಯಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲು ಶಾಸಕರ ಅನುದಾನದಲ್ಲಿ ರೂ. 13 ಲಕ್ಷ ಬಿಡುಗಡೆಯಾಗಿದೆ ಎಂದು ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ಸದಸ್ಯ ಅಂಚೆಮನೆ ಸುಧಿ ತಿಳಿಸಿದ್ದಾರೆ. ಸಂಪೂರ್ಣವಾಗಿ ಶಿಥಿಲಾವಸ್ಥೆಗೊಂಡಿದ್ದ ಅಂಗನವಾಡಿ ಕೇಂದ್ರದ ದುಸ್ಥಿತಿಯ ಬಗ್ಗೆ ಶಾಸಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಮನ ಸೆಳೆಯಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಶಾಸಕರು ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.