ಸೋಮವಾರಪೇಟೆ, ಜು. 11: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ತಾ. 17ರಂದು ವಿಪತ್ತು ನಿರ್ವಹಣೆ ಸಂಯೋಜಕರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಯೋಜನೆಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ತಿಳಿಸಿದ್ದಾರೆ.

ತಾ. 17ರಂದು ಅಪರಾಹ್ನ 2.30ಕ್ಕೆ ಕಾರ್ಯಾಗಾರ ಪ್ರಾರಂಭವಾಗಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಯೋಜನೆಯ ನಿರ್ದೇಶಕ ಡಾ. ಯೋಗೇಶ್, ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರ, ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ರವಿಪ್ರಸಾದ್ ಮಾಹಿತಿ ನೀಡಿದ್ದಾರೆ.