ಮಡಿಕೇರಿ, ಜು. 12: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‍ರವರ ಮುಂಬೈನ ದಾದ್ರದಲ್ಲಿರುವ ನಿವಾಸ ರಾಜಗೃಹದಲ್ಲಿ ತಾ. 7 ರಂದು ದುಷ್ಕರ್ಮಿಗಳು ದಾಳಿ ಮಾಡಿದ್ದು ಇದು ಅತ್ಯಂತ ಹೇಯ ಕೃತ್ಯ ಎಂದು ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಖಜಾಂಚಿಗಳಾದ ಹೆಚ್.ಎಂ. ನಂದಕುಮಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡರು, ಈ ಕೃತ್ಯವನ್ನು ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಖಂಡಿಸುತ್ತದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಮುಖಂಡ ಪುಲಿಯಂಡ ಜಗದೀಶ್, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಕೆ.ಎಂ. ವೆಂಕಟೇಶ್, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುರೈ ಹಾಗೂ ಇತರರು ಖಂಡಿಸಿದ್ದಾರೆ.