ಚೆಯ್ಯಂಡಾಣೆ, ಜು. 12: ಚೆಯ್ಯಂಡಾಣೆ ವ್ಯಾಪ್ತಿಯ ನರಿಯಂದಡ, ಕೋಕೇರಿ, ಚೇಲಾವರ, ಮರಂದೋಡ, ಕರಡ ಗ್ರಾಮದ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ವೀರಾಜಪೇಟೆ ವಿಭಾಗ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ತಾ. 14 ರಂದು (ನಾಳೆ) ಬೆಳಿಗ್ಗೆ 10 ಗಂಟೆಯಿಂದ ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ಕೈಗೊಂಡಿದೆ. ಆ ದಿಸೆಯಲ್ಲಿ ತೋಟದ ಮಾಲೀಕರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಎಚ್ಚರದಿಂದಿರುವಂತೆ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.