ಸಿದ್ದಾಪುರ, ಜು. 12: ಕಳೆದ ತಿಂಗಳು 26 ರಂದು ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟ ಹಿನ್ನೆಲೆ ತಾ. 26ರಂದು ಬೆಟ್ಟದಕಾಡು ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿತ್ತು. ನಂತರ ಬೆಟ್ಟದಕಾಡು ಗ್ರಾಮದಲ್ಲಿ ಇದುವರೆಗೆ ಯಾವುದೇ ಕೊರೊನಾ ಕೇಸ್ ಪತ್ತೆಯಾಗಿಲ್ಲ; ಈಗ 16 ದಿನ ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಸೀಲ್‍ಡೌನ್ ತೆರವುಗೊಳಿಸದಿದ್ದು ಕೂಡಲೆ ಕ್ರಮ ಕೈಗೊಳ್ಳುವಂತೆ ಈ ಭಾಗದ ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ ಮಂಜುನಾಥ್ ಆಗ್ರಹಿಸಿದ್ದಾರೆ.